ಚೋಮನ ದುಡಿ | Chomana Dudi
(By Kota Shivarama Karanth) Read EbookSize | 27 MB (27,086 KB) |
---|---|
Format | |
Downloaded | 668 times |
Last checked | 14 Hour ago! |
Author | Kota Shivarama Karanth |
ಅಸ್ಪೃಶ್ಯತೆಯ ವಿರುದ್ಧ ಇಪ್ಪತ್ತರ ದಶಕದಿಂದಲೇ ನಾಟಕ, ಕವನ, ಭಾಷಣ, ಚಲನಚಿತ್ರಗಳನ್ನು ರಚಿಸುತ್ತಿದ್ದ ಕಾರಂತರು, ಸಾಮಾಜಿಕ ಅನ್ಯಾಯ, ಅಸಮಾನತೆಯ ವಿರುದ್ಧ ಧ್ವನಿ ಎತ್ತಿ, ಭಾರತದ ಜಾತಿವ್ಯವಸ್ಥೆಯನ್ನು ವಿರೋಧಿಸಿದ್ದರು. ಅಸ್ಪೃಶ್ಯರು ಎದುರಿಸುತ್ತಿದ್ದ ಅನ್ಯಾಯಗಳ ವಿರುದ್ಧ ಕಾದಂಬರಿ ಮೂಲಕ ಧ್ವನಿ ಎತ್ತಿದ್ದ ಮೊದಲಿಗರು ಎಂಬ ಖ್ಯಾತಿ ಈ ಕಾರಂತರಿಗೆ ಇದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನಲ್ಲಿ ಆರ್ಥಿಕ ಸಮೀಕ್ಷೆಯಲ್ಲಿ ತೊಡಗಿದ್ದ ಕಾರಂತರು, ಆ ಜಿಲ್ಲೆಯ ಹೊಲೆಯರ ದಾರುಣ ಬದುಕನ್ನು ಕಾದಂಬರಿಯಲ್ಲಿ ಚಿತ್ರಿಸಿದ್ದಾರೆ.
ಚೋಮ ಒಬ್ಬ ಅಸ್ಪೃಶ್ಯ. ಐದು ಮಕ್ಕಳೊಂದಿಗೆ ಬದುಕು ಸಾಗಿಸುವ ಆತ ಹೆಂಡದ ಅಮಲಿನಲ್ಲಿ ದುಡಿಯುತ್ತಿದ್ದ. ಈ ವೇಳೆ ‘ದುಡಿ’ ಬಾರಿಸುತ್ತಿದ್ದ. ಬ್ರಾಹ್ಮಣ ಧನಿ ಸಂಕಪ್ಪಯ್ಯನವರ ಹೊಲದಲ್ಲಿ ಕೂಲಿಯೂ ಮಾಡುತ್ತಿದ್ದ. ತನ್ನದೇ ಜಮೀನು ಹೊಂದಿ, ಬೇಸಾಯ ಮಾಡುವದು ಆತನ ಕನಸು. ಹೊಲೆಯರು ಬೇಸಾಯ ಮಾಡುವಂತಿಲ್ಲ. ಆದರೆ, ಈ ಕುರಿತು ಸಂಕಪ್ಪಯ್ಯನವರಿಗೆ ಕೇಳಿ ಅವಮಾನ ಹೊಂದುವುದು ಬೇಡ ಎಂಬುದು ಮಗಳು ಬೆಳ್ಳಿಯ ಸಲಹೆ. ಆದರೂ, ಈ ವಿಷಯ ಹೇಳಿ ಧನಿಯಿಂದ ಬೈಸಿಕೊಳ್ಳುತ್ತಾನೆ. ಪರವೂರಿನಲ್ಲಿದ್ದ ಹಿರಿಯ ಮಗ ಚನಿಯ ಮಲೇರಿಯಾ ಜ್ವರಕ್ಕೆ ತುತ್ತಾಗಿ ಊರಿಗೆ ಬಂದು ಸಾಯುತ್ತಾನೆ. ಕಿರಿಯ ಮಗ ಗುರುವ, ಕ್ರಿಶ್ಚಿಯನ್ ಹುಡುಗಿಗೆ ಮದುವೆಯಾಗಿ ಆ ಧರ್ಮಕ್ಕೆ ಮತಾಂತರಗೊಳ್ಳುತ್ತಾನೆ. ಸಾಲದ ಹೊರೆ ಹೆಚ್ಚುತ್ತದೆ. ತೋಟದಲ್ಲಿ ಮನ್ವೆಲನ ಕಾಮದಾಸೆಗೆ ಮಗಳು ಬೆಳ್ಳಿ ಬಲಿಯಾಗುತ್ತಾಳೆ. ಮಗಳಿಗೆ ಮದುವೆ ಮಾಡಲಾಗದೇ, ತಾನು ಬೇಸಾಯ ಮಾಡಲಾಗದೇ ಚೋಮ ತತ್ತರಿಸುತ್ತಾನೆ. ಒಂದು ದಿನ, ಮಕ್ಕಳಾದ ಕಾಳ ಹಾಗೂ ನೀಲನನ್ನುಸ್ನಾನಕ್ಕಾಗಿ ತೋಡಿಗೆ ಕರೆದೊಯ್ಯುತ್ತಾನೆ. ನೀಲ ನೀರಿನಲ್ಲಿ ಮುಳುಗುತ್ತಿದ್ದಾಗ, ಜಾತಿ ಅಡ್ಡ ಬರುತ್ಬಂತದೆ. ನೀಲ ಸಾಯುತ್ತಾನೆ. .
ನಂತರ, ಚೋಮನ ಬೇಸಾಯದ ಕನಸು ಮರುಕಳಿಸುತ್ತದೆ. ಕ್ರೈಸ್ತ ಮತಕ್ಕೆ ಸೇರಲು ನಿರ್ಧರಿಸುತ್ತಾನೆ. ಆದರೆ, ಬೇಸಾಯದ ಆಸೆ ಕೈಗೂಡುವುದಿಲ್ಲ. ಮಗಳು ಬೆಳ್ಳಿ, ಮನ್ವೇಲನೊಂದಿಗೆ ಇದ್ದಿದ್ದು ತನಗೆ ಮಾಡಿದ ವಂಚನೆ ಎಂದು ತಿಳಿಯುತ್ತಾನೆ. ‘ಮಕ್ಕಳು ಹಾಗಾಗಲಿ...ಹೀಗಾಗಲಿ’ ಎಂದು ‘ಅವರು ಹೇಗಾದರೇನಂತೆ? ತನಗೇನು’ ಎಂದು ವಿಕಟವಾಗಿ ನಗುತ್ತಾ. ನಗುತ್ತಾ ‘ದುಡಿ’ಯನ್ನು ಜೋರು ಜೋರಾಗಿ ಬಾರಿಸುತ್ತಾನೆ. ಬೇಸಾಯಗಾರನಾಗುವ ಆಸೆಯೂ ಕಮರಿದ್ದ ಚೋಮನ ಮನಸ್ಥಿತಿ, ‘ದುಡಿ’ಯನ್ನು ಬಾರಿಸುತ್ತಲೇ ಜೀವ ಕಳೆದುಕೊಳ್ಳುತ್ತದೆ ಎಂಬ ಸಂಕೇತದೊಂದಿಗೆ ಕಾದಂಬರಿ ಮುಕ್ತಾಯವಾಗುತ್ತದೆ. .”