“Book Descriptions: ಲೇಖಕ ಡಾ. ಗಜಾನನ ಶರ್ಮ ಅವರು ಬರೆದ ಐತಿಹಾಸಿಕ ಕಾದಂಬರಿ "ಚೆನ್ನಭೈರಾದೇವಿ". ದಕ್ಷಿಣ ಕೊಂಕಣ ಹಾಗೂ ಮಲೆನಾಡನ್ನು 54 ವರ್ಷಗಳವರೆಗೂ ಆಳಿದ ಚೆನ್ನಭೈರಾದೇವಿ, ಕರಿಮೆಣಸಿನ ರಾಣಿಯ ಅಕಳಂಕ ಚರಿತೆ ಈ ಕೃತಿ. ಸಾಹಿತಿ ಜೋಗಿಯವರು ಈ ಕೃತಿಗೆ ಬೆನ್ನುಡಿ ಬರೆದು,"ಚೆನ್ನಭೈರಾದೇವಿ"ಯ ಬದುಕಿನ ಅಪರೂಪದ ಘಟನೆಗಳನ್ನು ತಂದು ಕಾದಂಬರಿಕಾರರು ನಮ್ಮ ಮುಂದಿಟ್ಟಿದ್ದಾರೆ. ಪುಟಪುಟದಲ್ಲೂ ರೋಮಾಂಚನಗೊಳಿಸುವ ವಿವರಗಳ ಜತೆಗೇ ರಾಜನೀತಿ, ಜೀವನ ವಿಧಾನ, ಧೀಮಂತಿಕೆ, ಉತ್ಕಟವಾದ ಪ್ರೇಮ ಮತ್ತು ಹೆಣ್ಣಿನ ಅಂತಃಸತ್ವವನ್ನು ತೆರೆದಿಡುವ ಈ ಕೃತಿ, ಕನ್ನಡ ಚಾರಿತ್ರಿಕ ಕಥನಗಳ ಪಟ್ಟಿಗೆ ಅಮೂಲ್ಯ ಸೇರ್ಪಡೆ. ಇತ್ತಿಚಿನ ಮೂರು ನಾಲ್ಕು ದಶಕಗಳಲ್ಲಿ ನಾನು ಇಷ್ಟು ಸಮೃದ್ಧವಾದ ಪ್ರಾಮಾಣಿಕವಾದ ಐತಿಹಾಸಿಕ ಕಾದಂಬರಿಯನ್ನು ಓದಿಲ್ಲʼ ಎಂದು ಅಭಿಪ್ರಾಯ ಪಟ್ಟಿದ್ದಾರೆ.” DRIVE